ಬೆಂಗಳೂರು: ರೋರಿಂಗ್ ಸ್ಟಾರ್ ಶ್ರೀಮುರಳಿ ಅಭಿನಯದ ‘ಮದಗಜ’ ಚಿತ್ರೀಕರಣ ಸಂದರ್ಭದಲ್ಲಿ ಅವಘಡ ಉಂಟಾಗಿದೆ.
ಸಾಹಸ ದೃಶ್ಯದ ಚಿತ್ರೀಕರಣದ ವೇಳೆ ಶ್ರೀಮುರುಳಿ ಅವರಿಗೆ ಪೆಟ್ಟಾಗಿದ್ದು, ಅವರಿಗೆ ಕೂಡಲೇ ಚಿಕಿತ್ಸೆ ಕೊಡಿಸಲಾಗಿದೆ. ಸಾಹಸ ದೃಶ್ಯದ ಚಿತ್ರೀಕರಣ ನಡೆಯುವ ಸಂದರ್ಭದಲ್ಲಿ ಶ್ರೀಮುರಳಿ ಆಯತಪ್ಪಿ ಬಿದ್ದು ಕಾಲಿಗೆ ಗಾಯವಾಗಿದೆ. ಚಿಕಿತ್ಸೆ ನೀಡಿದ ವೈದ್ಯರು ವಿಶ್ರಾಂತಿಗೆ ಸಲಹೆ ನೀಡಿದ್ದಾರೆ ಎನ್ನಲಾಗಿದೆ.
‘ರಾಬರ್ಟ್’ ಖ್ಯಾತಿಯ ನಿರ್ಮಾಪಕ ಉಮಾಪತಿ ಶ್ರೀನಿವಾಸ್ ನಿರ್ಮಾಣದಲ್ಲಿ, ಮಹೇಶ್ ಕುಮಾರ್ ನಿರ್ದೇಶನದಲ್ಲಿ ‘ಮದಗಜ’ ಮೂಡಿಬರುತ್ತಿದೆ.
Discussion about this post